ADVERTISEMENT

ಸಾಧಕರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರ ಪ್ರದಾನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2023, 5:42 IST
Last Updated 22 ಮಾರ್ಚ್ 2023, 5:42 IST
ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸರ್ವಾಂಗೀಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉಡುಪಿಯ ರಾಮಾಂಜಿ ನಮ್ಮಭೂಮಿ ಅವರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.
ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸರ್ವಾಂಗೀಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉಡುಪಿಯ ರಾಮಾಂಜಿ ನಮ್ಮಭೂಮಿ ಅವರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.   

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸಾಧನೆ ಮಾಡಿದ ಉಡುಪಿಯ ರಾಮಾಂಜಿ ನಮ್ಮಭೂಮಿ, ಮುತ್ತಮ್ಮ, ಮನೋಹರ್ ಪ್ರಸಾದ್ ಅವರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರವನ್ನು ಮಂಗಳವಾರ ಪ್ರದಾನ ಮಾಡಲಾಯಿತು.

ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಅರ್ಹರಿಗೆ ಪುರಸ್ಕಾರ ದೊರೆತಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ. ಬ್ಯಾಂಕ್ ಆಫ್ ಬರೋಡಾ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ಪುರಸ್ಕಾರ ಸ್ವೀಕರಿಸಿ ಮಾತನಾಡಿದ ರಾಮಾಂಜಿ, ಸಾಧಕ ಪುರಸ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ಪುರಸ್ಕಾರ ನೀಡಿದ ಸಂಸ್ಥೆಗೆ ಅಭಾರಿ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಕೊಣಾಜೆ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಡೇರಿಕ್ ಡಿಸೋಜ, ಮಂಗಳೂರು ವಿವಿಯ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ., ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಪ್ರೊ.ಮೊನಿಕಾ ಸದಾನಂದ, ಪ್ರೊ.ಕೆ.ಕಿಶೋರಿ ನಾಯಕ್ ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.