
ಪ್ರಜಾವಾಣಿ ವಾರ್ತೆಉಡುಪಿ: ಜಿಲ್ಲೆಯಲ್ಲಿ ಬುಧವಾರ 89 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಉಡುಪಿಯ 40, ಕುಂದಾಪುರದ 38 ಹಾಗೂ ಕಾರ್ಕಳದ 10 ಬೇರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 43 ಮಹಿಳೆಯರು, 46 ಪುರುಷರು ಇದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 25,720 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 428 ಇವೆ. ಬುಧವಾರ 59 ಮಂದಿ ಸೇರಿ ಇದುವರೆಗೂ 25100 ಸೋಂಕಿತರು ಗುಣಮುಖರಾಗಿದ್ದಾರೆ. 182 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.