ADVERTISEMENT

ಉಡುಪಿ: ಕೋವಿಡ್‌ಗೆ ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 16:00 IST
Last Updated 31 ಮಾರ್ಚ್ 2021, 16:00 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ 90 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಉಡುಪಿ ಮೂಲದ ವೃದ್ಧೆ ಬಹುಅಂಗಾಗ ವೈಫಲ್ಯ ಸೇರಿದಂತೆ ಹಲವು ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 56 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿತರಲ್ಲಿ 17 ಮಂದಿ ಮಣಿಪಾಲದ ಎಂಐಟಿ ಕ್ಯಾಂಪಸ್‌ಗೆ ಸೇರಿದ್ದಾರೆ. ಬುಧವಾರ 141 ಮಂದಿ ಸೋಂಕಿನಿಂದ ಗುಣರಾಗಿದ್ದಾರೆ, ಇದುವರೆಗೂ 24382 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT