ADVERTISEMENT

ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 15:49 IST
Last Updated 25 ಮಾರ್ಚ್ 2023, 15:49 IST
ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.   

ಉಡುಪಿ: ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಮಾಹೆ ಸಹ ಕುಲಪತಿ ಡಾ.ನಾರಾಯಣ ಸಭಾಹಿತ್ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ, ಸಾಹಿತಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಅಧ್ಯಾಪನ ನಿರಂತರ ಪ್ರಕ್ರಿಯೆಯಾಗಿದ್ದು ಬರವಣಿಗೆ ಹಾಗೂ ಅಧ್ಯಾಪನ ಒಟ್ಟಾಗಿ ಸಾಗಿದರೆ ಅವರವರ ಕ್ಷೇತ್ರದಲ್ಲಿ ಛಾಪು ಬರಲಿದೆ ಎಂದರು.

ಬರವಣಿಗೆ ಬದುಕಿನ ಭಾಗವಾಗಬೇಕು. ಬರವಣಿಗೆಯ ನೈತಿಕತೆ ಉಳಿಸಿಕೊಳ್ಳಬೇಕು, ಕಾಲಕ್ಕೆ ತಕ್ಕಂತೆ ಅಧ್ಯಯನ ಕ್ರಮವೂ ಬದಲಾಗುತ್ತಿರಬೇಕು. ಇದರಿಂದ ವಿವಿಧ ಕ್ಷೇತ್ರಗಳ ಬಗ್ಗೆ ಜ್ಞಾನ ಲಭಿಸುತ್ತದೆ ಎಂದು ಸಲಹೆ ನೀಡಿದರು.

ADVERTISEMENT

ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪಂಡಿತ ಪರಂಪರೆಗೆ ಪ್ರಸಿದ್ಧಿ ಪಡೆದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆೆಯಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನದ ಅರಿವು ವಿಸ್ತಾರವಾಗುತ್ತದೆ ಎಂದರು.

ಇದೇ ಸಂದರ್ಭ ಮುಳಿಯ ಗೋಪಾಲಕೃಷ್ಣ ಭಟ್ ಅವರ ‘ದೊಡ್ಡವರ ಸಣ್ಣ ಕಥೆಗಳು’ ಕೃತಿಯನ್ನು ಮುಳಿಯ ರಘುರಾಮ ಭಟ್ ಬಿಡುಗಡೆ ಮಾಡಿದರು. ಮುಳಿಯ ರಾಘವಯ್ಯ ಕೃತಿ ಪರಿಚಯ ಮಾಡಿದರು.

ಪ್ರಶಸ್ತಿ ಆಯ್ಕೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋರಮಾ ಎಂ.ಭಟ್, ಲೇಖಕಿ ಬಿ.ಶಶಿಲೇಖಾ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಇದ್ದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ ಬಿ.ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಜಿಎಂ ಕಾಲೇಜು, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.