ADVERTISEMENT

ಖಾಸಗಿ ವಾಹನಗಳಿಗೆ ತಾತ್ಕಾಲಿಕ ಪರವಾನಗಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 15:32 IST
Last Updated 6 ಏಪ್ರಿಲ್ 2021, 15:32 IST
ಜೆ.ಪಿ.ಗಂಗಾಧರ್, ಪ್ರಾದೇಶಿಕ ಸಾರಿಗೆ ಅಧಿಕಾರಿ
ಜೆ.ಪಿ.ಗಂಗಾಧರ್, ಪ್ರಾದೇಶಿಕ ಸಾರಿಗೆ ಅಧಿಕಾರಿ   

ಉಡುಪಿ: ಏ.7ರಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನಿಗಧಿತ ಮಾರ್ಗಗಳಲ್ಲಿ ಖಾಸಗಿ ವಾಹನಗಳನ್ನು ಓಡಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಪರವಾನಗಿ ನೀಡಲಾಗುತ್ತಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಪಿ.ಗಂಗಾಧರ್‌ ತಿಳಿಸಿದ್ದಾರೆ.

ಕಂಟ್ರಾಕ್ಟ್‌ ಕ್ಯಾರೇಜ್ ವಾಹನಗಳು, ಮ್ಯಾಕ್ಸಿ ಕ್ಯಾಬ್ ಹಾಗೂ ಮಿನಿ ಬಸ್‌ಗಳಿಗೆ ತಾತ್ಕಾಲಿಕ ಪರವಾನಗಿ ಮಂಜೂರು ಮಾಡಲು ಆರ್‌ಟಿಒ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಆಸಕ್ತ ಮಿನಿ ವಾಹನಗಳು, ಮ್ಯಾಕ್ಷಿ ಕ್ಯಾಬ್‌ ಹಾಗೂ ಬಸ್‌ಗಳ ಮಾಲೀಕರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಿ ಹಾಗೂ ಕಾರ್ಯದರ್ಶಿಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಸೆರೆಂಡರ್ ವಾಹನಗಳಿಗೆ ತೆರಿಗೆ ವಿನಾಯಿತಿ:

ADVERTISEMENT

ಮುಷ್ಕರದಿಂದಾಗುವ ಅನಾನುಕೂಲ ತಪ್ಪಿಸಲು ಹಿಂದೆ, ಸೆರೆಂಡರ್ ಮಾಡಲಾಗಿದ್ದ ಖಾಸಗಿ ಬಸ್‌ಗಳ ಮೋಟಾರು ವಾಹನ ತೆರಿಗೆಯನ್ನು ಏಪ್ರಿಲ್‌ಗೆ ಅನ್ವಯಿಸುವಂತೆ ವಿನಾಯಿತಿ ನೀಡಲಾಗಿದೆ ಎಂದು ಆರ್‌ಟಿಒ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.