
ಪ್ರಜಾವಾಣಿ ವಾರ್ತೆಉಡುಪಿ: ಕುಂದಾಪುರ, ಬ್ರಹ್ಮಾವರ, ಉಡುಪಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಭಾನುವಾರ ಗುಡುಗು ಸಿಡಿಲು ಸಹಿತ ಮಳೆ ಸುರಿಯಿತು.
ಸಂಜೆಯವರೆಗೂ ಬಿರುಬಿಸಿಲಿನ ವಾತಾವರಣವಿದ್ದು, ಏಕಾಏಕಿ ಮೋಡಕವಿದ ವಾತಾವರಣ ಸೃಷ್ಟಿಯಾಯಿತು. ಬಳಿಕ ಕೆಲಹೊತ್ತು ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು. ಬಿಸಿಲಿನ ದಗೆಗೆ ಕಂಗೆಟ್ಟಿದ್ದವರಿಗೆ ಮಳೆ ತಂಪೆರೆದ ಅನುಭವ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.