ADVERTISEMENT

ಗ್ರಾ.ಪಂ.ಗೆ ಆ‍್ಯಂಡ್ರಾಯ್ಡ್ ಸ್ವೈಪ್ ಯಂತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 15:53 IST
Last Updated 20 ಮಾರ್ಚ್ 2023, 15:53 IST
ಕಾರವಾರ ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯ್ತಿ ಪಿಡಿಒ ನಾಗೇಶ್ವರ ತೆಂಡೂಲ್ಕರ ಅವರಿಗೆ ಆ‍್ಯಂಡ್ರಾಯ್ಡ್ ಸ್ವೈಪ್ ಯಂತ್ರವನ್ನು ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ ವಿತರಿಸಿದರು
ಕಾರವಾರ ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯ್ತಿ ಪಿಡಿಒ ನಾಗೇಶ್ವರ ತೆಂಡೂಲ್ಕರ ಅವರಿಗೆ ಆ‍್ಯಂಡ್ರಾಯ್ಡ್ ಸ್ವೈಪ್ ಯಂತ್ರವನ್ನು ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ ವಿತರಿಸಿದರು   

ಕಾರವಾರ: ‘ಆಸ್ತಿ ತೆರಿಗೆ ಪಾವತಿಗೆ ಅನುಕೂಲ ಮಾಡಿಕೊಡಲು ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಂಡ್ರಾಯ್ಡ್ ಸ್ವೈಪ್ ಮಷಿನ್ ಬಳಸಿ ಆನ್‌ಲೈನ್‌ನಲ್ಲಿಯೇ ಸುಲಭವಾಗಿ ಪಾವತಿಗೆ ಅನುಕೂಲ ಕಲ್ಪಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯ್ತಿ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಆಸ್ತಿ ತೆರಿಗೆ ಡಿಜಿಟಲ್ ಸಂಗ್ರಹ ಯಂತ್ರ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಈಗ ಆಸ್ತಿ ತೆರಿಗೆ ಪಾವತಿಗೆ ಡಿಜಿಟಲ್ ಸ್ಪರ್ಶ ನೀಡಿದ್ದು, ಡಿಜಿಟಲ್ ಪಾವತಿಗಳನ್ನು ಸ್ವೀಕರಿಸಲು ಹೊಸ ಸ್ಮಾರ್ಟ್ ಮಾರ್ಗವನ್ನು ಪರಿಚಯಿಸಲಾಗಿದೆ. ಪಾವತಿಗಾಗಿ ಮಾಸ್ಟರ್ ಕಾರ್ಡ್, ವಿಸಾ, ಯುಪಿಐ ಹಾಗೂ ರೂಪೇ ಕಾರ್ಡ್‌ಗಳನ್ನು ಬಳಸಬಹುದಾಗಿದೆ’ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಅಭಿವೃದ್ಧಿ ಶಾಖೆಯ ಸಹಾಯಕ ಕಾರ್ಯದರ್ಶಿ ಜೆ.ಆರ್.ಭಟ್ಟ, ತಾಲ್ಲೂಕು ಪಂಚಾಯ್ತಿ ಇಒ ಬಾಲಪ್ಪನವರ ಆನಂದಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.