ADVERTISEMENT

ಹೊಸಪೇಟೆ: ತುಂಗಭದ್ರಾ ಜಲಾಶಯ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 15:10 IST
Last Updated 24 ಸೆಪ್ಟೆಂಬರ್ 2021, 15:10 IST
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ   

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಪ್ರವೇಶಕ್ಕೆ ಸಾರ್ವಜನಿಕರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಶುಕ್ರವಾರದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ.

ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗಿದ್ದರಿಂದ ಈ ಸಲ ಜುಲೈನಲ್ಲೇ ಜಲಾಶಯ ಭರ್ತಿಯಾಗಿತ್ತು. ಕ್ರಸ್ಟ್‌ಗೇಟ್‌ಗಳಿಂದ ನದಿಗೆ ನೀರು ಹರಿಸಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಜಲಾಶಯಕ್ಕೆ ಭೇಟಿ ಕೊಡುತ್ತಿದ್ದರು. ಅಂತರ ಮರೀಚಿಕೆಯಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್‌ 4ರಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಈಗ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಆದೇಶ ಹಿಂಪಡೆದಿದ್ದಾರೆ.

ಶನಿವಾರದಿಂದ (ಸೆ.25) ಪ್ರವಾಸಿಗರು ಜಲಾಶಯ, ಉದ್ಯಾನವನಕ್ಕೆ ಭೇಟಿ ಕೊಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.