ADVERTISEMENT

ಸಿರಿಧಾನ್ಯ ಸೇವನೆಯಿಂದ ಅಪೌಷ್ಟಿಕತೆ ನಿವಾರಣೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 15:14 IST
Last Updated 30 ಸೆಪ್ಟೆಂಬರ್ 2022, 15:14 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಪ್ರ‍್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಧೀಶ ಜಿ.ಜಿ. ಕುರವತ್ತಿ ಉದ್ಘಾಟಿಸಿದರು.  ಉಪ ನಿರ್ದೇಶಕ ಕೆ.ಕೆ. ಚಹ್ವಾಣ ಇದ್ದಾರೆ
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಪ್ರ‍್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಧೀಶ ಜಿ.ಜಿ. ಕುರವತ್ತಿ ಉದ್ಘಾಟಿಸಿದರು.  ಉಪ ನಿರ್ದೇಶಕ ಕೆ.ಕೆ. ಚಹ್ವಾಣ ಇದ್ದಾರೆ   

ವಿಜಯಪುರ: ಸಿರಿಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಆಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ನ್ಯಾಯಧೀಶ ಮತ್ತು ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಜಿ. ಕುರವತ್ತಿ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನೆಹರೂ ಯುವ ಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಪ್ರ‍್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೌಷ್ಟಿಕಾಂಶಗಳಿದ್ದು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇದನ್ನು ಸೇವಿಸುವ ಮೂಲಕ ಅಪೌಷ್ಠಿಕತೆಯಿಂದ ಹೊರಬರಬಹುದು ಎಂದು ತಿಳಿಸಿದರು.

ADVERTISEMENT

1925ರಲ್ಲಿ ಅಮೆರಿಕದಲ್ಲಿ ಪೋಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ 1982ರಲ್ಲಿ ಪೋಷಣ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಎಂದರು.

ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ. ಆದ್ದರಿಂದ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಮತೋಲಿತ ಆಹಾರ ಸೇವಿಸುವ ಮೂಲಕ ಉತ್ತಮ ಆರೋಗ್ಯ ಪ್ರಾಪ್ತಿ ಹೊಂದಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ.ಹೊಸಮನಿ ಮಾತನಾಡಿ, ಆರೋಗ್ಯವಂತ ತಾಯಿ ಮತ್ತು ಆರೋಗ್ಯವಂತ ಮಗುವಿನಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಬಿಎಲ್‌ಡಿಇ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ವಿಭಾಗ ಕೇಂದ್ರದ ಪ್ರಾಧ್ಯಾಪಕಿ ಡಾ.ಶೈಲಜಾ ಪಾಟೀಲ, ವೈವಿಧ್ಯಮಯ ಮತ್ತು ಸಮಪ್ರಮಾಣದ ಆಹಾರ ಸೇವನೆ ಇಂದಿನ ಅಗತ್ಯತೆಯಾಗಿದ್ದು, ಸ್ಥಳೀಯ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಉತ್ತಮ ಆರೋಗ್ಯಕ್ಕೆ ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು. ಶಿಕ್ಷಣದ ಕೊರತೆಯೂ ಆಪೌಷ್ಟಿಕತೆ ಹೆಚ್ಚಾಗಲು ಕಾರಣವಾಗಿದೆ ಎಂದರು.

ಪೌಷ್ಟಿಕ ಆಹಾರ ತಯಾರಿಕಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಮಾತನಾಡಿದರು.‌ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚಹ್ವಾಣ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ್ ಚವ್ಹಾಣ್, ಜಿಲ್ಲಾ ಪಂಚಾಯ್ತಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್. ಸಿ.ಮ್ಯಾಗೇರಿ, ದೀಪಾಕ್ಷಿ ಜಾನಕಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೋಂಗ್ರೆ,ಭಾರತಿ ಪಾಟೀಲ,ಸಿ ಕೆ ಸುರೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.