ADVERTISEMENT

ದ್ವಿತೀಯ ಪಿಯುಸಿ: ವಿಜಯಪುರ ಜಿಲ್ಲೆಗೆ ಶೇ 47.24 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 16:23 IST
Last Updated 20 ಸೆಪ್ಟೆಂಬರ್ 2021, 16:23 IST

ವಿಜಯಪುರ: ದ್ವಿತೀಯ ಪಿಯುಸಿ ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳಿಗೆಆಗಸ್ಟ್‌-ಸೆಪ್ಟಂಬರ್‌ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಿತವಾಗಿದ್ದು, ಜಿಲ್ಲೆಯ ಶೇ 47.24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 779ವಿದ್ಯಾರ್ಥಿಗಳ ಪೈಕಿ 368 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 411 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ542ಬಾಲಕರಲ್ಲಿ252(ಶೇ46.49) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 237 ಬಾಲಕಿಯರ ಪೈಕಿ116(ಶೇ48.95) ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶ:ಕಲಾ ವಿಭಾಗ ಶೇ 48.66, ವಾಣಿಜ್ಯ ವಿಭಾಗ ಶೇ 30.03, ವಿಜ್ಞಾನ ವಿಭಾಗ ಶೇ75 ರಷ್ಟು ಫಲಿತಾಂಶ ಲಭಿಸಿದೆ ಎಂದುಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎನ್. ಬಗಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.