ADVERTISEMENT

ಹಗರಿಬೊಮ್ಮನಹಳ್ಳಿ: ಉರ್ದು ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಶಾಲೆಯ 94 ವಿದ್ಯಾರ್ಥಿಗಳಲ್ಲಿ 83 ಚಿಣ್ಣರು ಮುಸ್ಲಿಂ ಸಮುದಾಯದವರು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 21:58 IST
Last Updated 19 ಆಗಸ್ಟ್ 2022, 21:58 IST
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿಯ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಕೃಷ್ಣ–ರಾಧೆ ವೇಷಭೂಷಣದಲ್ಲಿ ಸಂಭ್ರಮಿಸಿದರು
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿಯ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಕೃಷ್ಣ–ರಾಧೆ ವೇಷಭೂಷಣದಲ್ಲಿ ಸಂಭ್ರಮಿಸಿದರು   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ತಂಬ್ರಹಳ್ಳಿಯ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಜರುಗಿತು.

ಶಾಲೆಯ 94 ವಿದ್ಯಾರ್ಥಿಗಳಲ್ಲಿ 83 ಚಿಣ್ಣರು ಮುಸ್ಲಿಂ ಸಮುದಾಯದವರು. ಬಹುತೇಕ ಮಕ್ಕಳು ಕೃಷ್ಣ, ರಾಧೆ, ರುಕ್ಮಿಣಿಯರ ವೇಷಭೂಷಣಗಳಿಂದ ಗಮನ ಸೆಳೆದರು. ಗ್ರಾಮದ ಮುಖ್ಯಬೀದಿಗಳಲ್ಲಿ ಸಾಮೂಹಿಕವಾಗಿ ಹೆಜ್ಜೆ ಹಾಕಿದ ಕೃಷ್ಣ, ರಾಧೆಯರನ್ನು ಸಾರ್ವಜನಿಕರು ಕಣ್ತುಂಬಿಕೊಂಡರು.

ಮುಖ್ಯ ಶಿಕ್ಷಕ ಎಲ್.ರೆಡ್ಡಿನಾಯ್ಕ ಮಾತನಾಡಿ,‘ಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಹಿತ ಎಲ್ಲ ಹಬ್ಬಗಳನ್ನೂ ವಿಶೇಷವಾಗಿ ಆಚರಿಸಲಾಗುತ್ತಿದೆ. ಇದಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳ ಪಾಲಕರ ಸಹಕಾರ ಇದೆ’ ಎಂದರು.

ADVERTISEMENT

ಎಸ್‌ಡಿಎಂಸಿ ಸದಸ್ಯರಾದ ಗುಲ್ಜರ್, ಹಜರತ್ ಬೇಗಂ, ರೇಷ್ಮಾ, ಶಿಕ್ಷಕಿಯರಾದ ಶಾಕೀರಾ ಬೇಗಂ, ಶೇಖ್ ಮುಮ್ತಾಜ್, ಗೌರವ ಶಿಕ್ಷಕರಾದ ಶಬೀನಾ ಹಾಗೂ ಸಕ್ರಹಳ್ಳಿ ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.