ADVERTISEMENT

ಬೀದರ್‌ ಜಿಲ್ಲಾ ನ್ಯಾಯಾಲಯ: ಸ್ಟೆನೋ, ಟೈಪಿಸ್ಟ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 7:30 IST
Last Updated 19 ಸೆಪ್ಟೆಂಬರ್ 2021, 7:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೀದರ್‌ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋ, ಟೈಪಿಸ್ಟ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1) ಹುದ್ದೆಯ ಹೆಸರು :ಸ್ಟೆನೋ

ಹುದ್ದೆಗಳ ಸಂಖ್ಯೆ: 12

ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ADVERTISEMENT

ವೇತನ ಶ್ರೇಣಿ: ₹27,650-₹52,650 ( ವಿವಿಧ ಭತ್ಯೆಗಳು ಸೇರಿ)

2) ಹುದ್ದೆಯ ಹೆಸರು : ಟೈಪಿಸ್ಟ್‌

ಹುದ್ದೆಗಳ ಸಂಖ್ಯೆ: 9

ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ವೇತನ ಶ್ರೇಣಿ: ₹21,650-₹41,650 ( ವಿವಿಧ ಭತ್ಯೆಗಳು ಸೇರಿ)

ವಯಸ್ಸು: ಕನಿಷ್ಠ–18 ಗರಿಷ್ಠ–35

ನೇಮಕಾತಿ ವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಕೆ ವಿಧಾನ:ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆ ದಿನ:09-10-2021

ವೆಬ್‌ಸೈಟ್‌:https://districts.ecourts.gov.in/bidar-onlinerecruitment

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.