ADVERTISEMENT

BSF |  269 ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.22 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 5:59 IST
Last Updated 22 ಸೆಪ್ಟೆಂಬರ್ 2021, 5:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಭಾರತೀಯ ಗಡಿ ಭದ್ರತೆಪಡೆಯಲ್ಲಿ 269 ಜನರ್‌ ಡ್ಯೂಟಿ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಸದರಿ ಹುದ್ದೆಗಳನ್ನು ಕ್ರೀಡಾಕೋಟದ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಕ್ರೀಡೆಗಳ ಮಾಹಿತಿ, ಅರ್ಜಿ ಸಲ್ಲಿಕೆ ವಿಧಾನ, ನೇಮಕಾತಿ ಪ್ರಕ್ರಿಯೆಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು.

ADVERTISEMENT

ಹುದ್ದೆಯ ಹೆಸರು : ಕಾನ್‌ಸ್ಟೆಬಲ್‌ (ಜನರಲ್‌ ಡ್ಯೂಟಿ)

ಹುದ್ದೆಗಳ ಸಂಖ್ಯೆ : 269

ವಿದ್ಯಾರ್ಹತೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ : ಮಾಸಿಕ 21,700 - 69,100 ರವರೆಗೆ (ವಿವಿಧ ಭತ್ಯೆಗಳು ಸೇರಿ)

ವಯೋಮಿತಿ ಅರ್ಹತೆಗಳು : ಕನಿಷ್ಠ 18 ವರ್ಷದಿಂದ ಗರಿಷ್ಠ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಕಡೆ ದಿನಾಂಕ: 22-09-2021

ವೆಬ್‌ಸೈಟ್‌: http://projects.bsf.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.