ADVERTISEMENT

ಭಾರತೀಯ ನೌಕಾಪಡೆ | SSLC ವಿದ್ಯಾರ್ಹತೆ: 350 ನಾವಿಕ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2021, 10:15 IST
Last Updated 22 ಜುಲೈ 2021, 10:15 IST
ನಾವಿಕರು (ಸಾಂಕೇತಿಕ ಚಿತ್ರ)
ನಾವಿಕರು (ಸಾಂಕೇತಿಕ ಚಿತ್ರ)   

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 350 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಇದು 2021ರ ಆಗಸ್ಟ್‌ ಬ್ಯಾಚ್‌ ನೇಮಕಾತಿಯಾಗಿದ್ದು ಅವಿವಾಹಿತರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಗಳ ವಿವರ: 350 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ADVERTISEMENT

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17 ರಿಂದ ಗರಿಷ್ಠ 20 ವರ್ಷ ಮೀರದವರು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ₹14,000 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23–07–2021

ವೆಬ್‌ಸೈಟ್:www.joinindiannavy.gov.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.