ADVERTISEMENT

ಮೂಲ ವೇತನ ₹ 44,900 | ಕರ್ನಾಟಕ ಹೈಕೋರ್ಟ್‌: ಭಾಷಾಂತರಕಾರರ ನೇಮಕಾತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 7:48 IST
Last Updated 16 ಸೆಪ್ಟೆಂಬರ್ 2021, 7:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ಭಾಷಾಂತರಕಾರರ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹುದ್ದೆಯ ಹೆಸರು : ಭಾಷಾಂತರಕಾರರು

ADVERTISEMENT

ಹುದ್ದೆಗಳ ಸಂಖ್ಯೆ : 3

ವಿದ್ಯಾರ್ಹತೆ:ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಹಾಗೂ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ : ₹ 44,900 - ₹ 1,42,400 ಇತರೆ ಭತ್ಯೆಗಳು ಸೇರಿ

ವಯಸ್ಸು: ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ35ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ:ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆಯಬೇಕು. ಇದರಲ್ಲಿ ಮೆರೀಟ್‌ ಆಧಾರದಲ್ಲಿ1:10 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡುವುದು.

ಅರ್ಜಿ ಸಲ್ಲಿಕೆ ಕಡೆ ದಿನ:16-10-2021

ವೆಬ್‌ಸೈಟ್‌:https://karnatakajudiciary.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.