ADVERTISEMENT

ITI ವಿದ್ಯಾರ್ಹತೆ: NPCILನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 6:41 IST
Last Updated 29 ಆಗಸ್ಟ್ 2021, 6:41 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್)ದಲ್ಲಿ ಖಾಲಿ ಇರುವ ಟ್ರೈನಿ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:ಐಟಿಐ ವಿಭಾಗದಲ್ಲಿ ಟ್ರೈನಿ ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲೂ ಕೆಲವು ಹುದ್ದೆಗಳು ಖಾಲಿ ಇವೆ.

ಹುದ್ದೆಗಳ ಸಂಖ್ಯೆ:107

ವಿದ್ಯಾರ್ಹತೆ:ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐಯಲ್ಲಿ ಉತ್ತೀರ್ಣರಾಗಿರಬೇಕು.

ADVERTISEMENT

ವಯಸ್ಸು:ಆಗಸ್ಟ್‌ 31, 2021ಕ್ಕೆ ಅನ್ವಯವಾಗುವಂತೆ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ (ಕಂಪ್ಯೂಟರ್‌ ಟೆಸ್ಟ್‌) ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಸೆಪ್ಟೆಂಬರ್‌ 13, 2021

ವೆಬ್‌ಸೈಟ್‌:https://www.npcil.nic.in/index.aspx

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.