ADVERTISEMENT

ಸಬ್‌ಇನ್ಸ್‌ಪೆಕ್ಟರ್‌ ನೇಮಕಾತಿ: ಇಟಿ, ಪಿಎಸ್‌ಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 8:07 IST
Last Updated 27 ಜುಲೈ 2021, 8:07 IST

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇದ್ದ947 ಸಿವಿಲ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಯಇಟಿ, ಪಿಎಸ್‌ಟಿ ಪರೀಕ್ಷೆಯಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಹಿಂದೆ ಬೆಳಗಾವಿಯಡಿಎಆರ್ ಪರೇಡ್‌ ಮೈದಾನದಲ್ಲಿ ದಿನಾಂಕ 28-07-2021 ರಿಂದ 12-08-2021 ರವರೆಗೆ ಇಟಿ, ಪಿಎಸ್‌ಟಿ (ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ) ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಮಳೆಯ ಕಾರಣದಿಂದಾಗಿ ಈ ವೇಳಾಪಟ್ಟಿಯನ್ನು ರದ್ದು ಮಾಡಲಾಗಿತ್ತು.

ಹೊಸ ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕ 02-08-2021 ರಿಂದ 18-08-2021 ರವರೆಗೆ ಬೆಳಗಾವಿಯ ಡಿಎಆರ್ ಪರೇಡ್‌ ಮೈದಾನದಲ್ಲಿ ಇಟಿ, ಪಿಎಸ್‌ಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಲಿಖಿತ ಪರೀಕ್ಷೆಯನ್ನು ಅಕ್ಟೋಬರ್‌ ತಿಂಗಳಲ್ಲಿ ನಡೆಸಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ. ಆದಾಗ್ಯೂ ಲಿಖಿತ ಪರೀಕ್ಷೆಯ ದಿನಾಂಕ ಇನ್ನು ಅಂತಿಮವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.