ADVERTISEMENT

SBI: ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಮಾ.15 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2023, 10:32 IST
Last Updated 27 ಫೆಬ್ರುವರಿ 2023, 10:32 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್‌, ಸೀನಿಯರ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕ ಮಾಡಲಾಗುವುದು.

ಹುದ್ದೆಗಳ ಸಂಖ್ಯೆ: 8

ADVERTISEMENT

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಕಡ್ಡಾಯ.

ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15–03-2023

ಹೆಚ್ಚಿನ ಮಾಹಿತಿಗೆ: https://sbi.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.