ADVERTISEMENT

ಉಡುಪಿ ಜಿಲ್ಲಾ ನ್ಯಾಯಾಲಯ: ಸ್ಟೆನೋ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 8:34 IST
Last Updated 7 ಸೆಪ್ಟೆಂಬರ್ 2021, 8:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಸ್ಟೆನೋ
ಹುದ್ದೆಗಳ ಸಂಖ್ಯೆ: 8

ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು.

ADVERTISEMENT

ವೇತನ ಶ್ರೇಣಿ: ₹27,650-₹52,650 ( ವಿವಿಧ ಭತ್ಯೆಗಳು ಸೇರಿ)

ವಯಸ್ಸು: ಕನಿಷ್ಠ–18 ಗರಿಷ್ಠ–35

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.

ರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆ ದಿನ: 30-09-2021

ವೆಬ್‌ಸೈಟ್‌:https://recruitmenthck.kar.nic.in/district/udu/stg/home.php

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.