ADVERTISEMENT

www.sbi.co.in | 641 ಮ್ಯಾನೇಜರ್‌, ಸೂಪರ್‌ವೈಸರ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 21 ಮೇ 2022, 7:30 IST
Last Updated 21 ಮೇ 2022, 7:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಮ್ಯಾನೇಜರ್‌, ಸೂಪರ್‌ವೈಸರ್‌ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌ಬಿಐನ ನಿವೃತ್ತ ಅಧಿಕಾರಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಜೂನ್‌ 7ಅರ್ಜಿ ಸಲ್ಲಿಸುವ ಕಡೆಯ ದಿನವಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 641

ADVERTISEMENT

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್‌ಬಿಐ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು.

ನೇಮಕಾತಿ ಪ್ರಕ್ರಿಯೆ: 100 ಅಂಕಗಳಿಗೆ ಸಂದರ್ಶನ ಇದೆ. ಇದರಲ್ಲಿ ಆಯ್ಕೆಯಾದವರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 07–06–2021

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡಿ: https://www.sbi.co.in

ಅಧಿಸೂಚನೆ:https://sbi.co.in/documents/77530/25386736/17052022_Final+ATM+Anytime+Channel+AD+17.05.2022.pdf/50f3c3eb-4a8a-c95a-9fd0-0368ad53dfa4?t=1652798432029

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.