ADVERTISEMENT

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ

ಸಿಬಿಎಸ್‌ಇ ವೆಬ್‌ಸೈಟ್, ಡಿಜಿಲಾಕರ್ ವೇದಿಕೆಯಲ್ಲಿ ಫಲಿತಾಂಶ ಲಭ್ಯ

ಪಿಟಿಐ
Published 30 ಜುಲೈ 2021, 5:30 IST
Last Updated 30 ಜುಲೈ 2021, 5:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ.

ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಲಭ್ಯವಾಗಲಿದೆ. ಜೊತೆಗೆ, digilocker.gov.in ಮತ್ತು ಮೊಬೈಲ್‌ನಲ್ಲಿರುವ ಡಿಜಿಲಾಕರ್ ಅಪ್ಲಿಕೇಷನ್‌ನಲ್ಲೂ ಫಲಿತಾಂಶಗಳನ್ನು ನೋಡಬಹುದು. ಈಗ ತಿಳಿಸಿರುವ ವೆಬ್‌ಸೈಟ್‌, ಅಪ್ಲಿಕೇಷನ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ರೋಲ್‌ ನಂಬರ್‌ ಅನ್ನು ನಮೂದಿಸಿ, ಫಲಿತಾಂಶವನ್ನು ಪಡೆಯಬಹುದಾಗಿದೆ.

ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಅಂಕ ಪಟ್ಟಿ ಡಿಜಿಲಾಕರ್‌ ಅಪ್ಲಿಕೇಷನ್‌ನಲ್ಲಿ ಲಭವಿದೆ. ವಿದ್ಯಾರ್ಥಿಗಳು, ಈ ಡಿಜಿಲಾಕರ್‌ ವೆಬ್‌ಸೈಟ್ ಅಥವಾ ಅಪ್ಲಿಕೇಷನ್‌ ತೆರೆದು, ಸಿಬಿಎಸ್‌ಇಯ ‘ಎಜುಕೇಷನ್‌‘ ವಿಭಾಗಕ್ಕೆ ಹೋಗಿ, ತಮಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.