ADVERTISEMENT

ತರಾತುರಿಯಲ್ಲಿ ಶಿಕ್ಷಣ ನೀತಿ ಜಾರಿಗೆ ವಿರೋಧ: ಸಿ.ಎಂ.ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2021, 19:20 IST
Last Updated 12 ಸೆಪ್ಟೆಂಬರ್ 2021, 19:20 IST

ಬೆಂಗಳೂರು: ರಾಜ್ಯ ಸರ್ಕಾರವು ತರಾತುರಿಯಲ್ಲಿ ಹಾಗೂ ಏಕಪಕ್ಷೀಯವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಗೊಳಿಸುತ್ತಿರು ವುದನ್ನು ಖಂಡಿಸಿ ವಿಜ್ಞಾನಿಗಳು ಹಾಗೂ ಶಿಕ್ಷಣ ತಜ್ಞರು ಸೇರಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಎಲ್ಲಾ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

‘ಸರ್ಕಾರವು ನೂತನ ಶಿಕ್ಷಣ ನೀತಿಯ ಅನುಷ್ಠಾನ ನಿರ್ಧಾರವನ್ನು ಕೂಡಲೇ ಕೈಬಿಡಬೇಕು.ಬೋಧನೆ ಹಾಗೂ ಜ್ಞಾನಾರ್ಜನೆಗೆ ಮಾರಕವಾ ಗಿರುವ ಬಹು ಶಿಸ್ತೀಯ ಪದ್ಧತಿ ಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಕರ್ನಾಟಕ) ರಾಜ್ಯ ಘಟಕದ ಅಧ್ಯಕ್ಷ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಒತ್ತಾಯಿಸಿದ್ದಾರೆ.

‘ರಾಜ್ಯ ಸರ್ಕಾರವು ಪ್ರಜಾತಾಂ ತ್ರಿಕ ಚರ್ಚೆಗಳಿಲ್ಲದೆ ಇದನ್ನು ಪದ ವಿ ಹಂತದಲ್ಲಿ ಜಾರಿಗೊಳಿಸಲು ಮುಂ ದಾಗಿದೆ. ಸಾರ್ವಜನಿಕರು, ಶಿಕ್ಷಣ ತಜ್ಞರು ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಬಡ ವಿದ್ಯಾರ್ಥಿಗಳು ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಹೊಂದಿರುವ ಎಲ್ಲಾ ಶಾಸಕರು ಅಧಿವೇಶನದಲ್ಲಿ ನೂತನ ಶಿಕ್ಷಣ ನೀತಿಯನ್ನು ವಿರೋಧಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.