ADVERTISEMENT

ವಿದ್ಯಾರ್ಥಿ ವೇತನ: ಕೋಟಕ್‌ ಕನ್ಯಾ ಸ್ಕಾಲರ್‌ಶಿಪ್‌ 2021

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 19:30 IST
Last Updated 15 ಆಗಸ್ಟ್ 2021, 19:30 IST
ಸಾಂದರ್ಬಿಕ ಚಿತ್ರ
ಸಾಂದರ್ಬಿಕ ಚಿತ್ರ   

ಕೋಟಕ್‌ ಕನ್ಯಾ ಸ್ಕಾಲರ್‌ಶಿಪ್‌ 2021

ವಿವರ: ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಕೋಟಕ್‌ ಮಹೀಂದ್ರ ಸಂಸ್ಥೆಯು ಪಿಯುಸಿ ಮುಗಿಸಿದ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿರಬೇಕು. ಪಿಯುಸಿಯಲ್ಲಿ ಶೇ 75ಕ್ಕೂ ಹೆಚ್ಚು ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 3 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ADVERTISEMENT

ಆರ್ಥಿಕ ಸಹಾಯ: ವರ್ಷಕ್ಕೆ ₹ 1 ಲಕ್ಷ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 30 ಆಗಸ್ಟ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/KKGS1

ಕೋವಿಡ್‌ ಕ್ರೈಸಿಸ್‌ (ಜ್ಯೋತಿ ಪ್ರಕಾಶ್‌) ಸಪೋರ್ಟ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021

ವಿವರ: ಕೋವಿಡ್‌ ಕಾರಣದಿಂದಾಗಿ ಮುಂದಿನ ಓದಿನ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಒಂದನೇ ತರಗತಿಯಿಂದ ಹಿಡಿದು ಪದವಿ ಓದುತ್ತಿರುವವರೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪೋಷಕರನ್ನು ಕಳೆದುಕೊಂಡಿರುವ, ಉದ್ಯೋಗ ನಷ್ಟ ಮುಂತಾದ ಸಮಸ್ಯೆಯಿಂದ ಬಳಲುತ್ತಿರುವ ಕುಟುಂಬದ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆರ್ಥಿಕ ಸಹಾಯ: ವಾರ್ಷಿಕ ₹ 30 ಸಾವಿರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿ: www.b4s.in/praja/CCSP1

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.