ADVERTISEMENT

NEET Exam 2021: ಇಂದು ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2021, 4:49 IST
Last Updated 12 ಸೆಪ್ಟೆಂಬರ್ 2021, 4:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದಹೆಲಿ:ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು (ನೀಟ್) ಇಂದು (ಸೆ.12, ಭಾನುವಾರ) ನಡೆಯುತ್ತಿದೆ.

ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್‌ಟಿಎ) ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿತ್ತು. ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ಪರೀಕ್ಷೆ ನಡೆಯಲಿದೆ.

ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ನಿಂದ ಅನುಮೋದನೆ ಲಭಿಸಿದೆ. ಈ ಸಂಬಂಧ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತ್ತು.

ADVERTISEMENT

16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳ ಮನವಿಯ ಮೇರೆಗೆ ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

ಕೋವಿಡ್ ನಡುವೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಎನ್95 ಮಾಸ್ಕ್ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ತರುವ ಅವಕಾಶವಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.