ADVERTISEMENT

ವಿದ್ಯಾರ್ಥಿ ವೇತನ; ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಸ್ಕಾಲರ್‌ಶಿಪ್‌

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 20:00 IST
Last Updated 22 ಆಗಸ್ಟ್ 2021, 20:00 IST
   

ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಸ್ಕಾಲರ್‌ಶಿಪ್‌ 2021–23

ವಿವರ: ಎಂಬಿಎ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: 2021–23 ಬ್ಯಾಚ್‌ನ ಎಂಬಿಎ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಹೆಚ್ಚಿರಬಾರದು.

ADVERTISEMENT

ಆರ್ಥಿಕ ಸಹಾಯ: ವರ್ಷಕ್ಕೆ ₹ 1 ಲಕ್ಷ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 2 ಸೆಪ್ಟೆಂಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/IFBMS2

ಒಎನ್‌ಜಿಸಿ ಸ್ಕಾಲರ್‌ಶಿಪ್‌ 2020–21

ವಿವರ: ಎಸ್‌ಸಿ/ ಎಸ್‌ಟಿ/ ಒಬಿಸಿ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಎಂಜಿನಿಯರಿಂಗ್‌, ಎಂಬಿಬಿಎಸ್‌, ಎಂಬಿಎ ಅಥವಾ ಜಿಯೊಫಿಸಿಕ್ಸ್‌/ ಜಿಯಾಲಜಿಯಲ್ಲಿ ಎಂಎಸ್‌ಸಿ ಮಾಡುತ್ತಿರುವ ಎಸ್‌ಸಿ/ ಎಸ್‌ಟಿ/ ಒಬಿಸಿ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು. ಹಿಂದಿನ ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕ ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯವು ಸಾಮಾನ್ಯ ವರ್ಗ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ₹ 2 ಲಕ್ಷವನ್ನು ಮೀರಿರಬಾರದು ಮತ್ತು ಎಸ್‌ಸಿ/ ಎಸ್‌ಟಿ ವಿದ್ಯಾರ್ಥಿಗಳಿಗೆ ₹ 4.5 ಲಕ್ಷ ಮೀರಿರಬಾರದು.

ಆರ್ಥಿಕ ಸಹಾಯ: ವರ್ಷಕ್ಕೆ ₹ 48 ಸಾವಿರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 5 ಸೆಪ್ಟೆಂಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅಥವಾ ಅಂಚೆ ಮೂಲಕ (ಒಎನ್‌ಜಿಸಿ ಕಚೇರಿ)

ಹೆಚ್ಚಿನ ಮಾಹಿತಿಗೆ: www.b4s.in/praja/OSB8

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.