ADVERTISEMENT

ದ್ವಿತೀಯ ಪಿಯುಸಿ ಫಲಿತಾಂಶ : ಶೇ. 29.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 6:33 IST
Last Updated 20 ಸೆಪ್ಟೆಂಬರ್ 2021, 6:33 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಫಲಿತಾಂಶ ಪ್ರಕಟಿಸಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಫಲಿತಾಂಶ ಪ್ರಕಟಿಸಿದರು.   

ಬೆಂಗಳೂರು: 2020–21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಆಗಸ್ಟ್‌– ಸೆಪ್ಟೆಂಬರ್‌ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯಲ್ಲಿ ಶೇ 29.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 5,507 ಮಂದಿ ಪಾಸಾಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಫಲಿತಾಂಶ ಪ್ರಕಟಿಸಿದರು.

ಪಾಸಾದವರ ಪೈಕಿ, 580 ಮಂದಿ ಉನ್ನತ ಶ್ರೇಣಿ ಪಡೆದರೆ, 1,939 ಮಂದಿ ಪ್ರಥಮ ಶ್ರೇಣಿ, 1,578 ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ.

ADVERTISEMENT

592 ಹೊಸಬರ ಪೈಕಿ 556, ಪುನರಾವರ್ತಿತ 351ರಲ್ಲಿ 183, ಖಾಸಗಿ ವಿದ್ಯಾರ್ಥಿಗಳಲ್ಲಿ 17,470ರಲ್ಲಿ 4,768 ಮಂದಿ ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ 12,203ರಲ್ಲಿ 3,912, ವಾಣಿಜ್ಯ ವಿಷಯದಲ್ಲಿ 6,114ರಲ್ಲಿ 1,527, ವಿಜ್ಞಾನದಲ್ಲಿ 96ರಲ್ಲಿ 68 ವಿದ್ಯಾರ್ಥಿಗಳ ಪಾಸಾಗಿದ್ದಾರೆ.

ಈ ಲಿಂಕ್‌ನಲ್ಲಿ www.karresults.nic.in ಫಲಿತಾಂಶ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.