ADVERTISEMENT

ಡ್ರಗ್ಸ್‌ ಪ್ರಕರಣ: ಇ.ಡಿ. ಎದುರು ಹಾಜರಾದ ತೆಲುಗು ನಟ ರವಿತೇಜ

ಪಿಟಿಐ
Published 9 ಸೆಪ್ಟೆಂಬರ್ 2021, 8:00 IST
Last Updated 9 ಸೆಪ್ಟೆಂಬರ್ 2021, 8:00 IST
 ತೆಲುಗು ನಟ ರವಿತೇಜ
ತೆಲುಗು ನಟ ರವಿತೇಜ   

ಹೈದರಾಬಾದ್‌: ನಾಲ್ಕು ವರ್ಷಗಳ ಹಿಂದೆ ನಗರದಲ್ಲಿ ನಡೆದಿದ್ದ ‘ಡಗ್ಸ್‌ ಪ್ರಕರಣ‘ಕ್ಕೆ ಸಂಬಂಧಿಸಿದಂತೆ ತೆಲುಗು ಸಿನಿಮಾ ರಂಗದ ಖ್ಯಾತ ನಟ ರವಿತೇಜ ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

2017ರಲ್ಲಿ ನಡೆದ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನಟ ರವಿತೇಜ ಸೇರಿ ತೆಲುಗು ಸಿನಿಮಾ ರಂಗದ ನಟರು ಮತ್ತು ನಿರ್ದೇಶಕರು ಸೇರಿ ಹತ್ತು ಮಂದಿಗೆ ನೋಟಿಸ್‌ ಜಾರಿ ಮಾಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಪುರಿ ಜಗನ್ನಾಥ, ನಟಿಯರಾದ ಚಾರ್ಮೀ ಕೌರ್ ಮತ್ತು ರಕುಲ್ ಪ್ರೀತ್ ಸಿಂಗ್‌, ನಟರಾದ ನಂದು ಮತ್ತು ರಾಣಾ ದಗ್ಗುಬಾಟಿ ಅವರು ಈಗಾಗಲೇ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.