ADVERTISEMENT

ತೆಲುಗು ನಟ ಅಡಿವಿ ಶೇಷ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 6:16 IST
Last Updated 21 ಸೆಪ್ಟೆಂಬರ್ 2021, 6:16 IST
ಅಡಿವಿ ಶೇಷ್‌
ಅಡಿವಿ ಶೇಷ್‌   

ಹೈದರಾಬಾದ್‌: ಟಾಲಿವುಡ್‌ ನಟ ಅಡಿವಿ ಶೇಷ್ ತೀವ್ರ ಅನಾರೋಗ್ಯದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ’ಮೇಜರ್‌’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಅವರು ಕಳೆದೊಂದು ವಾರದಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆರಕ್ತದ ಪ್ಲೇಟ್‌ಲೆಟ್‌ಗಳ ಹಠಾತ್ ಕುಸಿತದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಅಡಿವಿ ಶೇಷ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಎರಡು-ಮೂರು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದ ’ಮೇಜರ್‌’ ಸಿನಿಮಾದಲ್ಲಿ ಅಡಿವಿ ಶೇಷ್‌ ನಾಯಕ ನಟರಾಗಿ ನಟಿಸಿದ್ದಾರೆ. 26/11 ಮುಂಬೈ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನ ಆಧರಿಸಿದ ಸಿನಿಮಾವಾಗಿದೆ.

ಶಶಿ ಕಿರಣ್ ಟಿಕ್ಕ ನಿರ್ದೇಶನದ ’ಮೇಜರ್’ ಸಿನಿಮಾ ಜುಲೈ ತಿಂಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿತ್ತು. ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಇನ್ನು ಘೋಷಣೆ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.