ADVERTISEMENT

ತನಿಖಾ ಅಧಿಕಾರಿ ಪಾತ್ರದಲ್ಲಿ ಮೋಹನ್‌ಲಾಲ್‌

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 19:30 IST
Last Updated 14 ಅಕ್ಟೋಬರ್ 2019, 19:30 IST
   

ಮೆಗಾಸ್ಟಾರ್‌ ಮೋಹನ್‌ಲಾಲ್‌ ತಮ್ಮ ಮುಂದಿನ ಚಿತ್ರದಲ್ಲಿ ಪತ್ತೇದಾರಿ ಪೊಲೀಸ್‌ ಅಧಿಕಾರಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾವು ಕೇರಳದಲ್ಲಿ ಹೆಚ್ಚು ಸದ್ದು ಮಾಡಿದ ಕೊಲೆ ಪ್ರಕರಣವೊಂದರ ಎಳೆಯನ್ನು ಹೊಂದಿದೆ ಎನ್ನಲಾಗಿದೆ.

ಸಿನಿಮಾದ ಚಿತ್ರೀಕರಣವು 2020ರ ಫೆಬ್ರುವರಿ ತಿಂಗಳಲ್ಲಿ ಆರಂಭವಾಗಲಿದೆ.

ಮೋಹನ್‌ಲಾಲ್‌ ನಟಿಸಿರುವ ‘ಲೂಸಿಫರ್‌’ ಸಿನಿಮಾಕ್ಕೆ ಹೆಚ್ಚು ಪ್ರಶಂಸೆ ವ್ಯಕ್ತವಾಗಿತ್ತು. ಈ ಸಿನಿಮಾವನ್ನು ನಟ, ನಿರ್ದೇಶಕ ಫೃಥ್ವಿರಾಜ್‌ ಸುಕುಮಾರನ್‌ ನಿರ್ದೇಶನ ಮಾಡಿದ್ದು, ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿದೆ. ಪ್ರೇಕ್ಷಕರು ಈ ಚಿತ್ರದಲ್ಲಿ ಮೋಹನ್‌ಲಾಲ್‌ ಅಭಿನಯಕ್ಕೆ ಸಕಾರಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ‘ಲೂಸಿಫರ್‌’ ಚಿತ್ರದ ಸೀಕ್ವೆಲ್‌ ಸದ್ಯದಲ್ಲೇ ಸೆಟ್ಟೇರಲಿದೆ ಎಂದು ಪೃಥ್ವಿರಾಜ್‌ ಘೋಷಿಸಿದ್ದಾರೆ. ‘ಲೂಸಿಫರ್‌ 2’ರಲ್ಲೂ ಮೋಹನ್‌ಲಾಲ್‌ ನಟಿಸಲಿದ್ದಾರೆ ಎಂಬ ಸುದ್ದಿ ಇದೆ. ಚಿತ್ರದ ಅಧಿಕೃತ ಘೋಷಣೆಗಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.