ADVERTISEMENT

ಅಕ್ರಮ ಹಣ ವರ್ಗಾವಣೆ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಮನ್ಸ್‌ ನೀಡಿದ ಇ.ಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 12:34 IST
Last Updated 16 ಸೆಪ್ಟೆಂಬರ್ 2021, 12:34 IST
ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್
ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಸಮನ್ಸ್‌ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 30 ರಂದು ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ಇ.ಡಿ ನಡೆಸಿತ್ತು.

ಸೆಪ್ಟೆಂಬರ್‌ 26ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್ ಅವರಿಗೆ ಇ.ಡಿ ಸೂಚಿಸಿದೆ.

ADVERTISEMENT

ಕಿಚ್ಚ ಸುದೀಪ್‌ ಅಭಿನಯದ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್‌ ಅವರ ಪಾತ್ರದ ಫಸ್ಟ್‌ಲುಕ್‌ ಸಹ ಬಿಡುಗಡೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.