ADVERTISEMENT

ಚಂದನ್‌ ಶೆಟ್ಟಿ ಸಂಗೀತ ನಿರ್ದೇಶನದ ‘ನೋಡು ಶಿವ’ ಆಲ್ಬಂ ಹಾಡು ಬಿಡುಗಡೆಗೆ ಸಿದ್ಧ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 16:40 IST
Last Updated 3 ಫೆಬ್ರುವರಿ 2021, 16:40 IST
ಚಂದನ್‌ ಶೆಟ್ಟಿ, ಮೇಘಾ ಶೆಟ್ಟಿ ಹಾಗೂ ಸುಮಿತ್‌ ಎಂ.ಕೆ
ಚಂದನ್‌ ಶೆಟ್ಟಿ, ಮೇಘಾ ಶೆಟ್ಟಿ ಹಾಗೂ ಸುಮಿತ್‌ ಎಂ.ಕೆ   

ಖ್ಯಾತ ರ್‍ಯಾಪರ್‌ ಚಂದನ್‌ ಶೆಟ್ಟಿ ಸಂಗೀತ ನಿರ್ದೇಶನ ನೀಡಿ ಹಾಡಿರುವ ‘ನೋಡು ಶಿವ’ ಆಲ್ಬಂ ಹಾಡು, ಭಾರಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ.

ಪರಾರಿ ಚಿತ್ರ ನಿರ್ಮಿಸಿದ್ದ ಸುಮಿತ್ ಎಂ.ಕೆ ಹಾಗೂ ಕಿರುತೆರೆ ನಟಿ ಮೇಘಾ ಶೆಟ್ಟಿ ಇದರಲ್ಲಿಅಭಿನಯಿಸಿದ್ದು, ಅತಿಥಿ ಪಾತ್ರದಲ್ಲಿ ಚಂದನ್ ಶೆಟ್ಟಿ ಕೂಡಾ ಹೆಜ್ಜೆ ಹಾಕಿದ್ದಾರೆ.
ಸುಮಿತ್ ಅವರೆ ಗೀತ ರಚನೆ ಮಾಡಿದ್ದು, ಸುಮಾರು ‌‌‍60 ನೃತ್ಯ ಕಲಾವಿದರು ಹಾಗೂ 150ಕ್ಕೂ ಅಧಿಕ ಸಹಕಲಾವಿದರು ಹಾಡಿನಲ್ಲಿ ಅಭಿನಯಿಸಿದ್ದಾರೆ. ಕನ್ನಡದ ಮಟ್ಟಿಗೆ ಇಷ್ಟು ಅದ್ದೂರಿಯಾಗಿ‌ ಮೂಡಿಬಂದಿರುವ ಮೊದಲ‌‌ ಆಲ್ಬಂ ಹಾಡು ಇದಾಗಿದೆ ಎಂದು ತಂಡವು ಹೇಳಿದೆ.

ಇತ್ತೀಚೆಗೆ ಬನ್ನೇರುಘಟ್ಟ ‌ರಸ್ತೆಯ ಎ.ಎಂ.ಸಿ ಇಂಜನಿಯರಿಂಗ್ ಕಾಲೇಜು ಆವರಣದಲ್ಲಿ ಈ ಹಾಡಿನ‌ ಚಿತ್ರೀಕರಣ ನಡೆದಿದೆ. ಎಂ.ಕೆ‌ ಆರ್ಟ್ಸ್ ಲಾಂಛನದಲ್ಲಿ ಮೋನಿಕಾ‌ ಕಲ್ಲುರಿ ಅವರು ಇದನ್ನು ನಿರ್ಮಾಣ‌ ಮಾಡಿದ್ದು, ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ.‌ ಹೆಬ್ಬುಲಿ ಖ್ಯಾತಿಯ ಕರುಣಾಕರ್ ಅವರ ಛಾಯಾಗ್ರಹಣ ಮಾಡಿದ್ದು, ಮೂರುವರೆ ನಿಮಿಷಗಳ‌ ಅವಧಿಯ ಈ ಆಲ್ಬಂ ಹಾಡು ಇದೇ ತಿಂಗಳಲ್ಲಿ ‌ಆನಂದ್ ಆಡಿಯೋ‌ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.