ADVERTISEMENT

ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಮಿಸ್ಟರ್‌ ಇಂಡಿಯಾ ಮನೋಜ್‌ ಪಾಟೀಲ್‌

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 8:49 IST
Last Updated 16 ಸೆಪ್ಟೆಂಬರ್ 2021, 8:49 IST
ಮನೋಜ್‌ ಪಾಟೀಲ್‌
ಮನೋಜ್‌ ಪಾಟೀಲ್‌   

ಮುಂಬೈ: ಮಾಜಿ ಮಿಸ್ಟರ್‌ ಇಂಡಿಯಾ ಮನೋಜ್‌ ಪಾಟೀಲ್‌ ಆತ್ಮಹತ್ಯೆಗೆ ಯತ್ನಿಸಿದ್ದು ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಬೆಳಗ್ಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರುಕೂಪರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ನಟ ಸಾಹೀಲ್‌ ಖಾನ್‌ ಅವರ ಕಿರುಕುಳದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದುಮರಣ ಪತ್ರ ಬರೆದಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಮನೋಜ್‌ ಅವರು 2016ರಲ್ಲಿ ಮಿಸ್ಟರ್‌ ಇಂಡಿಯಾ ಸ್ಪರ್ಧೆಯಲ್ಲಿ ಗೆಲುವು ದಾಖಲಿಸಿದ್ದರು.

ಸದ್ಯ ಅವರು ಮಾಡೆಲ್‌ ಆಗಿ ಕೆಲಸ ಮಾಡುವುದರ ಜತೆಗೆ ಫಿಟ್‌ನೆಸ್‌ ತರಬೇತಿ ಶಾಲೆಯನ್ನು ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.