ADVERTISEMENT

ರಸ್ತೆ ಅಪಘಾತ: ತೆಲುಗು ಚಿತ್ರ ನಟ ಸಾಯಿ ಧರ್ಮ ತೇಜ್ ಸ್ಥಿತಿ ಗಂಭೀರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2021, 1:46 IST
Last Updated 11 ಸೆಪ್ಟೆಂಬರ್ 2021, 1:46 IST
ಸಾಯಿ ಧರ್ಮ ತೇಜ್
ಸಾಯಿ ಧರ್ಮ ತೇಜ್   

ಹೈದರಾಬಾದ್‌: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಾಯಿ ಧರ್ಮ ತೇಜ್‌ ಸ್ಥಿತಿ ಗಂಭೀರವಾಗಿದೆ.

ಹೈದರಾಬಾದ್‌ನ ಕೇಬಲ್‌ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್‌ ಅವರು ಶುಕ್ರವಾರ ರಾತ್ರಿ ಬೈಕ್‌ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.

ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಯಿ ಧರ್ಮ ತೇಜ್‌ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ADVERTISEMENT

ಚಿರಂಜೀವಿ ಕುಟುಂಬದ ಸದಸ್ಯರಾಗಿರುವ ಸಾಯಿ ಧರ್ಮ ತೇಜ್‌ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಚಿರಂಜೀವಿ, ಪವನ್‌ಕಲ್ಯಾಣ್‌, ವರುಣ್‌ ತೇಜ್‌ ಸೇರಿದಂತೆ ಹಲವರು ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.