ADVERTISEMENT

ಹೆಬ್ಬಕ ಸಂರಕ್ಷಣೆ: ಸರ್ಕಾರದ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 20:29 IST
Last Updated 25 ಜನವರಿ 2021, 20:29 IST
ಹೆಬ್ಬಕ (ಗ್ರೇಟ್ ಇಂಡಿಯನ್ ಬಸ್ಟರ್ಡ್)
ಹೆಬ್ಬಕ (ಗ್ರೇಟ್ ಇಂಡಿಯನ್ ಬಸ್ಟರ್ಡ್)   

ಬೆಂಗಳೂರು: ಅವಸಾನದ ಅಂಚಿನಲ್ಲಿರುವ ಹೆಬ್ಬಕಗಳನ್ನು (ಗ್ರೇಟ್ ಇಂಡಿಯನ್ ಬಸ್ಟರ್ಡ್) ಸಂರಕ್ಷಿಸುವ ಕುರಿತು ಕೊಯಮತ್ತೂರಿನ ಸಲೀಮ್ ಸೆಂಟರ್ ಫಾರ್ ಆರ್ನಿಥಾಲಜಿ ಆ್ಯಂಡ್ ನ್ಯೂಟ್ರಲ್ ಹಿಸ್ಟರಿ (ಸ್ಯಾಕಾನ್) ನೀಡಿರುವ ಶಿಫಾರಸುಗಳನ್ನು ಪಾಲಿಸಲು ಸರ್ಕಾರ ಬಯಸುತ್ತದೆಯೇ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬಳ್ಳಾರಿಯ ಎಡ್ವರ್ಡ್ ಸಂತೋಷ್ ಮಾರ್ಟಿನ್ ಮತ್ತು ಇತರ ಇಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಸ್ಯಾಕಾನ್ ಸಲ್ಲಿಸಿರುವ ವರದಿಯ ಪ್ರತಿಯನ್ನು ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ, ಈ ಅದರ ಅನುಷ್ಠಾನದ ಬಗ್ಗೆ ಏನನ್ನೂ ತಿಳಿಲ್ಲ. ಹೀಗಾಗಿ ಪ್ರಮಾಣ ಪತ್ರ ಸಲ್ಲಿಸುವುದು ಸೂಕ್ತ’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಫೆಬ್ರುವರಿ 2ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.