ADVERTISEMENT

ಆನೆಗಳನ್ನು ರಕ್ಷಿಸಿ: ರಾಬರ್ಟ್ ಬೆಡಗಿ ಆಶಾ ಭಟ್ ಕರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಆಗಸ್ಟ್ 2021, 12:07 IST
Last Updated 12 ಆಗಸ್ಟ್ 2021, 12:07 IST
ಆಶಾ ಭಟ್ ಇನ್‌ಸ್ಟಾಗ್ರಾಂ ಪೋಸ್ಟ್
ಆಶಾ ಭಟ್ ಇನ್‌ಸ್ಟಾಗ್ರಾಂ ಪೋಸ್ಟ್    

ಬೆಂಗಳೂರು: ಆಗಸ್ಟ್ 12 ರಂದು ಪ್ರತಿವರ್ಷ ಅಂತರರಾಷ್ಟ್ರೀಯ ಆನೆ ದಿನವನ್ನಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಬರ್ಟ್ ಚಿತ್ರದ ನಟಿ ಆಶಾ ಭಟ್ ಕೂಡ ಆನೆಯ ಬಗ್ಗೆ ಪ್ರೀತಿ ಮತ್ತು ಕಾಳಜಿ ವ್ಯಕ್ತಪಡಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ ಆಶಾ ಭಟ್, ‘ಹಾಥಿ ಮೇರೆ ಸಾಥಿ’ ಎಂಬ ಅಡಿಬರಹದೊಂದಿಗೆ ಆನೆಯ ಜತೆಗಿರುವ ಫೋಟೊ ಪೋಸ್ಟ್ ಮಾಡಿದ್ದಾರೆ.

ಆನೆಗಳು ಗಾತ್ರದಲ್ಲಿ ದೊಡ್ಡದಾಗಿ ಕಂಡರೂ, ಅವು ಪಾಪದ ಪ್ರಾಣಿಯಾಗಿದೆ. ಆನೆಗಳನ್ನು ರಕ್ಷಿಸಲು ಮತ್ತು ಅವುಗಳ ಬಗ್ಗೆ ಕಾಳಜಿ ವಹಿಸಲು ನಾವೆಲ್ಲ ಒಂದಾಗಬೇಕು ಎಂದು ನಟಿ ಆಶಾ ಭಟ್ ಹೇಳಿದ್ದಾರೆ.

ADVERTISEMENT

ಜಾಗತಿಕ ಆನೆ ದಿನದ ಸಂದರ್ಭದಲ್ಲಿ ಸೆಲೆಬ್ರಿಟಿಗಳು ಕೂಡ ಆನೆಯ ಕುರಿತ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ನಟಿ ದಿಯಾ ಮಿರ್ಜಾ, ನಟಿ ಶ್ರುತಿ ಹಾಸನ್ ಕೂಡ ಆನೆಯ ಸಂರಕ್ಷಣೆ ಬಗ್ಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.