ADVERTISEMENT

ಹೆಚ್ಚಿದ ತಾಪಮಾನ: ರಾಜ್ಯದ ಹಲವೆಡೆ ಒಂದೆರಡು ದಿನಗಳಲ್ಲಿ ಜೋರು ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 2:26 IST
Last Updated 26 ಮಾರ್ಚ್ 2021, 2:26 IST
   

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಧಗೆ ಹೆಚ್ಚುತ್ತಿದ್ದು, ಕೆಲವು ಭಾಗದಲ್ಲಿ ಒಂದೆರಡು ದಿನಗಳಲ್ಲಿ ಜೋರು ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

‘ತಾಪಮಾನ ಹೆಚ್ಚಾಗಿರುವುದರಿಂದ ಈ ಬಾರಿ ಪೂರ್ವ ಮುಂಗಾರು ಮಳೆ ಬೇಗ ಪ್ರಾರಂಭವಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಭಾಗದಲ್ಲಿ ಒಂದೆರಡು ದಿನಗಳಲ್ಲಿ ಜೋರು ಮಳೆ ಸುರಿಯಬಹುದು. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಭಾಗಗಳಲ್ಲಿ ಸದ್ಯಕ್ಕೆ ಮಳೆ ಬರುವ ಸಾಧ್ಯತೆ ಇಲ್ಲ’ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಪೂರ್ವ ಮುಂಗಾರು ಅವಧಿ ಎನ್ನುತ್ತಾರೆ. ರಾಜ್ಯದಲ್ಲಿ ಏಪ್ರಿಲ್‌ನಲ್ಲಿ ಮಳೆ ಸುರಿಯುತ್ತಿತ್ತು. ಈ ಬಾರಿ ಕೆಲವು ಭಾಗದಲ್ಲಿ ಬೇಗ ಮಳೆ ಸುರಿಯಬಹುದು’ ಎಂದೂ ಹೇಳಿದರು.

ADVERTISEMENT

‘ಸಾಮಾನ್ಯವಾಗಿ ಪೂರ್ವ ಮುಂಗಾರಿನಲ್ಲಿ ಗುಡುಗು–ಮಿಂಚು ಜೋರಾಗಿರುತ್ತದೆ. ಗಾಳಿಯಿಂದಾಗಿ ಇದು ಎಲ್ಲೆಡೆ ಚಲಿಸಿ ಮಳೆ ಬರುತ್ತದೆ. ಕೇರಳ, ತಮಿಳುನಾಡು, ದಕ್ಷಿಣ ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಪೂರ್ವ ಮುಂಗಾರು ಚಟುವಟಿಕೆ ಚುರುಕುಗೊಳ್ಳುವ ಸಾಧ್ಯತೆ ಇದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.