ಪುಣೆ: ನಾಯಕ ರೋಹಿತ್ ಶರ್ಮಾ (ಔಟಾಗದೆ 56; 33ಎ, 6ಬೌಂ, 2ಸಿ) ಮತ್ತು ಎವಿನ್ ಲೂಯಿಸ್ (47; 43ಎ, 3ಬೌಂ, 2ಸಿ) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 11ನೇ ಆವೃತ್ತಿಯ ಪಂದ್ಯದಲ್ಲಿ 8 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಗೆದ್ದಿದೆ.
ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ಶನಿವಾರ ಮೊದಲು ಬ್ಯಾಟ್ ಮಾಡಿದ ಮಹೇಂದ್ರ ಸಿಂಗ್ ದೋನಿ ಸಾರಥ್ಯದ ಸೂಪರ್ ಕಿಂಗ್ಸ್ 20 ಓವರ್ಗಳಲ್ಲಿ 5 ವಿಕೆಟ್ಗೆ 169ರನ್ ಗಳಿಸಿತು. ಸವಾಲಿನ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 19.4 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.
ಆರಂಭಿಕ ಬ್ಯಾಟ್ಸ್ಮನ್ ಶೇನ್ ವಾಟ್ಸನ್ 12 ರನ್ ಗಳಿಸಿ ಔಟಾದರು. ನಂತರ ಅಂಬಟಿ ರಾಯುಡು ಜೊತೆಗೂಡಿದ ಎಡಗೈ ಬ್ಯಾಟ್ಸ್ಮನ್ ರೈನಾ ಎರಡನೇ ವಿಕೆಟ್ ಜೊತೆಯಾಟದಲ್ಲಿ 71 ರನ್ ಗಳಿಸಿದರು.
ಸಂಕ್ಷಿಪ್ತ ಸ್ಕೋರು: ಚೆನ್ನೈ ಸೂಪರ್ ಕಿಂಗ್ಸ್: 20 ಓವರ್ಗಳಲ್ಲಿ 5 ವಿಕೆಟ್ಗಳಿಗೆ 169 (ಅಂಬಟಿ ರಾಯುಡು 46, ಸುರೇಶ್ ರೈನಾ 75, ಮಹೇಂದ್ರಸಿಂಗ್ ದೋನಿ 26, ಮಿಷೆಲ್ ಮೆಕ್ಲೆಗಾನ್ 26ಕ್ಕೆ2, ಹಾರ್ದಿಕ್ ಪಾಂಡ್ಯ 39ಕ್ಕೆ1, ಕೃಣಾಲ್ ಪಾಂಡ್ಯ 32ಕ್ಕೆ2). ಮುಂಬೈ ಇಂಡಿಯನ್ಸ್: 19.4 ಓವರ್ಗಳಲ್ಲಿ 2 ವಿಕೆಟ್ಗೆ 170 (ಸೂರ್ಯಕುಮಾರ್ ಯಾದವ್ 44, ಎವಿನ್ ಲೂಯಿಸ್ 47, ರೋಹಿತ್ ಶರ್ಮಾ ಔಟಾಗದೆ 56, ಹಾರ್ದಿಕ್ ಪಾಂಡ್ಯ ಔಟಾಗದೆ 13; ಹರಭಜನ್ ಸಿಂಗ್ 20ಕ್ಕೆ1, ಡ್ವೇನ್ ಬ್ರಾವೊ 21ಕ್ಕೆ1). ಫಲಿತಾಂಶ: ಮುಂಬೈ ಇಂಡಿಯನ್ಸ್ಗೆ 8 ವಿಕೆಟ್ ಜಯ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.