ADVERTISEMENT

Fact check: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಹಾಯ ಧನ ಸಿಗಲಿದೆಯೇ?

​ಪ್ರಜಾವಾಣಿ ವಾರ್ತೆ
Published 30 ಮೇ 2021, 18:55 IST
Last Updated 30 ಮೇ 2021, 18:55 IST
   

'ಕೋವಿಡ್ 19 ನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರ್ಕಾರ 4 ಲಕ್ಷ ರೂಪಾಯಿ ಸಹಾಯ ಧನ ಪ್ರಕಟಿಸಿದೆ. ಇದನ್ನು ಪಡೆಯಲು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇರಬೇಕಾದ ನಮೂನೆ ಈ ಪಿಡಿಎಫ್‌ ಫೈಲ್ ನಲ್ಲಿದೆ. ಈ ವಿಷಯ ಎಲ್ಲಾರಿಗೂ ತಲುಪಿಸಿ' ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜತೆಗೆ ನಾಲ್ಕು ಪುಟಗಳ ಒಂದು ಪಿಡಿಎಫ್ ಕಡತ ಸಹ ವೈರಲ್ ಆಗಿದೆ.

ಇದು ಸುಳ್ಳು ಸುದ್ದಿ. ವಿಕೋಪಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ 4 ಲಕ್ಷ ಪರಿಹಾರ ನೀಡಲು ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯ್ದೆಯ 12 (3) ಸೆಕ್ಷನ್‌ ಅಡಿಯಲ್ಲಿ ಅವಕಾಶವಿದೆ. ಇದಕ್ಕೆ ಸಂಬಂಧಿಸಿದ ಕಡತವನ್ನು, ಸರ್ಕಾರದ ಆದೇಶ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. 'ದೇಶದಾದ್ಯಂತ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ, ಈ ಕಾಯ್ದೆ ಅಡಿ 4 ಲಕ್ಷ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ' ಎಂದು ಸುಪ್ರೀಂ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್ ನೀಡಿದೆಯಷ್ಟೆ. ಕೋವಿಡ್‌ನಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡುತ್ತೇವೆ ಎಂಬ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT