ADVERTISEMENT

FACT CHECK: ಜಿತೇಂದ್ರ ಸಿಂಗ್‌ ಅವರು ರಾಹುಲ್ ಷೂ ಲೇಸ್ ಕಟ್ಟಿದ್ದು ನಿಜವೇ?

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2022, 18:33 IST
Last Updated 25 ಡಿಸೆಂಬರ್ 2022, 18:33 IST
ಜಿತೇಂದ್ರ ಸಿಂಗ್‌ ಅವರು ತಮ್ಮ ಷೂಲೇಸ್‌ ಕಟ್ಟಿಕೊಂಡ ದೃಶ್ಯವಿರುವ ವಿಡಿಯೊವಿನ ಸ್ಕ್ರೀನ್‌ಶಾಟ್‌
ಜಿತೇಂದ್ರ ಸಿಂಗ್‌ ಅವರು ತಮ್ಮ ಷೂಲೇಸ್‌ ಕಟ್ಟಿಕೊಂಡ ದೃಶ್ಯವಿರುವ ವಿಡಿಯೊವಿನ ಸ್ಕ್ರೀನ್‌ಶಾಟ್‌   

‘ಭಾರತ್ ಜೋಡೋ’ ಯಾತ್ರೆಯ ವೇಳೆ ಹರಿಯಾಣದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿ ಅವರ ಷೂ ಲೇಸ್ ಕಟ್ಟಿದ್ದಾರೆ ಎನ್ನಲಾದ ವಿಡಿಯೊ ಹರಿದಾಡುತ್ತಿದೆ. ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ವಿಡಿಯೊವನ್ನು ಟ್ವೀಟ್ ಮಾಡಿದ್ದು, ರಾಹುಲ್ ಸೊಕ್ಕಿನ ವರ್ತನೆ ತೋರಿದ್ದಾರೆ ಎಂದು ಟೀಕಿಸಿದ್ದಾರೆ. ಹಲವು ಬಿಜೆಪಿ ಮುಖಂಡರೂ ಮರುಟ್ವೀಟ್ ಮಾಡಿದ್ದಾರೆ. ಆದರೆ ಇದು ಸುಳ್ಳು.

ಜಿತೇಂದ್ರ ಸಿಂಗ್ ಅವರು ರಾಹುಲ್ ಅವರ ಷೂಲೇಸ್ ಕಟ್ಟಿದ್ದಾರೆ ಎಂಬುದು ಸುಳ್ಳು ಎಂದು ‘ಆಲ್ಟ್ ನ್ಯೂಸ್’ ವರದಿ ಮಾಡಿದೆ. ಮತ್ತೊಂದು ಮಗ್ಗುಲಿನ ದೃಶ್ಯವನ್ನು ಪೋಸ್ಟ್ ಮಾಡಿರುವ ಜಿತೇಂದ್ರ ಸಿಂಗ್, ‘ನನ್ನ ಕಾಲಿನ ಷೂಲೇಸ್ ಅನ್ನು ನಾನು ಕಟ್ಟಿಕೊಂಡೆ. ಇದನ್ನು ಬಿಜೆಪಿ ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿ, ಸುಳ್ಳುಗಳನ್ನು ಹೆಣೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರು, ಮತ್ತೊಂದು ಆಯಾಮದ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT