ADVERTISEMENT

Fact Check: ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ?

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 19:30 IST
Last Updated 5 ಮಾರ್ಚ್ 2023, 19:30 IST
   

ಬಿಹಾರದಿಂದ ಕೆಲಸ ಹುಡುಕಿಕೊಂಡು ತಮಿಳುನಾಡಿಗೆ ಬಂದಿರುವ ಹಿಂದಿ ಭಾಷಿಕ ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ ನಡೆಯುತ್ತಿದೆ ಎಂದು ಹೇಳಲಾಗುವ ಕೆಲವು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವ್ಯಕ್ತಿಯೊಬ್ಬರ ಮೇಲೆ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳಿರುವ ವಿಡಿಯೊಗಳನ್ನು ಹಂಚಿಕೊಳ್ಳಲಾಗಿದೆ. ಬಿಹಾರದಿಂದ ಬಂದ ಕಾರ್ಮಿಕರು ರಾಜ್ಯದಲ್ಲಿ ತಮಿಳು ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಇದೆಲ್ಲ ಸುಳ್ಳು.

ತಮಿಳುನಾಡಿನಲ್ಲಿ ಹಿಂದಿ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಸುಳ್ಳು ಹಬ್ಬಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತಮಿಳುನಾಡು ಡಿಜಿಪಿ ಸ್ಪಷ್ಟಪಡಿಸಿದ್ದಾರೆ ಎಂದು ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ಪ್ರಕಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೊಗಳಿಗೂ, ಈ ಘಟನೆಗೂ ಸಂಬಂಧವಿಲ್ಲ. ಈ ಸಂಬಂಧ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ಸ್ಟಾಲಿನ್ ಅವರು ದೂರವಾಣಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬಿಹಾರ ಪ್ರಜೆಗಳ ರಕ್ಷಣೆಯ ಭರವಸೆ ನೀಡಿದ್ದಾರೆ. ಬಿಹಾರದ ಸರ್ಕಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿ, ರಾಜ್ಯದ ಕಾರ್ಮಿಕರ ಸುರಕ್ಷತೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ. ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT