ADVERTISEMENT

India Covid-19 Update: ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಇಳಿಕೆ

ಪಿಟಿಐ
Published 24 ಸೆಪ್ಟೆಂಬರ್ 2021, 6:22 IST
Last Updated 24 ಸೆಪ್ಟೆಂಬರ್ 2021, 6:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸಕ್ರಿಯ ಪ್ರಕರಣಗಳು ನಿರಂತರವಾಗಿ ಇಳಿಮುಖವಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ 8 ರವರೆಗಿನ ಮಾಹಿತಿಯಂತೆ ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಶೇ 0.89ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,00,162ಕ್ಕೆ ಇಳಿದಿದೆ. ಇದು 188 ದಿನಗಳಲ್ಲಿ ಅತೀ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಇದು 2020ರ ಮಾರ್ಚ್‌ ತಿಂಗಳಿನಿಂದ ಇಲ್ಲಿವರೆಗೆ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಗುರುವಾರ ಹೊಸದಾಗಿ 1478 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಇಪ್ಪತ್ನಾಲ್ಕು ಗಂಟೆಗಳಲ್ಲಿ 31,382 ಹೊಸ ಕೋವಿಡ್‌ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 3,35,94,803ಕ್ಕೆ ಏರಿಕೆಯಾಗಿದೆ. ಹೊಸದಾಗಿ 318 ಸಾವಿನ ಪ್ರಕರಣಗಳು ವರದಿಯಾಗಿವೆ. ಸಾವಿನ ಒಟ್ಟು ಪ್ರಕರಣಗಳ ಸಂಖ್ಯೆ 4,46,368ಕ್ಕೆ ಏರಿದೆ. ಗುಣಮುಖರಾದವರ ಪ್ರಮಾಣ ಶೇ 97.78ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.