ADVERTISEMENT

Covid-19 India Update:186 ದಿನಗಳಲ್ಲೇ ಕಡಿಮೆ ಮಟ್ಟಕ್ಕೆ ಸಕ್ರಿಯ ಪ್ರಕರಣಗಳು

covid

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2021, 4:30 IST
Last Updated 22 ಸೆಪ್ಟೆಂಬರ್ 2021, 4:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 26,964 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 383 ಮಂದಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 34,167 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದುಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,989 ರಷ್ಟಾಗಿದ್ದು, 186 ದಿನಗಳಲ್ಲೇ ಅತ್ಯಂತ ಕಡಿಮೆಯಾಗಿದೆ.

ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 3,35,31,498ಕ್ಕೆ ಏರಿದ್ದು, 3,27,83,741 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ನಿಂದ ಈವರೆಗೆ 4,45,768 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ದೇಶದಾದ್ಯಂತ 82,65,15,754 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.