ADVERTISEMENT

Covid-19 India Update: ಸಕ್ರಿಯ ಪ್ರಕರಣ, ಪಾಸಿಟಿವಿಟಿ ದರ ಇಳಿಕೆ

ಪಿಟಿಐ
Published 1 ಅಕ್ಟೋಬರ್ 2021, 5:25 IST
Last Updated 1 ಅಕ್ಟೋಬರ್ 2021, 5:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಶುಕ್ರವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್‌–19ನ 26,727 ಹೊಸ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,37,66,707ಕ್ಕೆ ಏರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 1,796 ಹೊಸ ಪ್ರಕರಣಗಳು ವರದಿಯಾಗಿವೆ. ಈವರೆಗಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,75,224ಕ್ಕೆ ಇಳಿಕೆಯಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.89ರಷ್ಟು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ಕಳೆದ ಒಂದು ದಿನದಲ್ಲಿ ಕೋವಿಡ್‌ ಸೋಂಕಿನಿಂದ 277 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನಿಂದ ಸತ್ತವರ ಸಂಖ್ಯೆ 4,48,339ಕ್ಕೆ ಏರಿದಂತಾಗಿದೆ. ಕೋವಿಡ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 97.86ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಗುರುವಾರ ದೇಶದಾದ್ಯಂತ 15,20,899 ಮಂದಿಗೆ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿವರೆಗೂ 57,04,77,338 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ.

ಪ್ರತಿನಿತ್ಯದ ಪಾಸಿಟಿವಿಟಿ ರೇಟ್‌ ಶೇ 1.76ರಷ್ಟಿದೆ. ಕಳೆದ 32 ದಿನಗಳಲ್ಲಿ ಶೇ 3ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ದಾಖಲಾಗುತ್ತಿದೆ. ವಾರದ ಪಾಸಿಟಿವಿಟಿ ದರ ಶೇ 1.70ರಷ್ಟಿದೆ. ಕಳೆದ 98 ದಿನಗಳಿಂದ ಶೇ 3ಕ್ಕಿಂತ ಪಾಸಿಟಿವಿಟಿ ರೇಟ್‌ ವರದಿಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.