ADVERTISEMENT

5 ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜೂಹಿ ಚಾವ್ಲಾ

ಪಿಟಿಐ
Published 31 ಮೇ 2021, 12:18 IST
Last Updated 31 ಮೇ 2021, 12:18 IST
ನಟಿ-ಪರಿಸರವಾದಿ ಜೂಹಿ ಚಾವ್ಲಾ
ನಟಿ-ಪರಿಸರವಾದಿ ಜೂಹಿ ಚಾವ್ಲಾ   

ನವದೆಹಲಿ: ದೇಶದಲ್ಲಿ 5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪಿಸುವುದರ ವಿರುದ್ಧ ನಟಿ-ಪರಿಸರವಾದಿ ಜೂಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ನಾಗರಿಕರು, ಪ್ರಾಣಿಗಳು, ಸಸ್ಯ ಮತ್ತು ಪ್ರಾಣಿಗಳ ಮೇಲೆ ವಿಕಿರಣ ಪರಿಣಾಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿದ್ದಾರೆ.

ಈ ಅರ್ಜಿಯನ್ನು ಕೈಗೆತ್ತಿಕೊಂಡನ್ಯಾಯಮೂರ್ತಿ ಸಿ ಹರಿ ಶಂಕರ್ ಅವರು ಜೂನ್ 2 ರಂದು ವಿಚಾರಣೆಗೆ ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದಾರೆ.

5 ಜಿಯನ್ನು ಜಾರಿಗೆ ತರಲು ದೂರಸಂಪರ್ಕ ಉದ್ಯಮವು ಯೋಜನೆ ರೂಪಿಸಿದ್ದರೆ, ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ ಮತ್ತು ಭೂಮಿಯ ಮೇಲಿನ ಯಾವುದೇ ಸಸ್ಯಗಳು ಈ ವಿಕಿರಣಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ, ದಿನದ 24 ಗಂಟೆಗಳು, ವರ್ಷದ 365 ದಿನಗಳು, ಆರ್‌ಎಫ್‌ ವಿಕಿರಣದ ಮಟ್ಟವು ಇಂದು ಅಸ್ತಿತ್ವದಲ್ಲಿರುವುದಕ್ಕಿಂತ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ ಎಂದು ಚಾವ್ಲಾ ಹೇಳಿದ್ದಾರೆ.

ADVERTISEMENT

ಈ 5 ಜಿ ಯೋಜನೆಗಳು ಮಾನವರ ಮೇಲೆ ಗಂಭೀರ, ಬದಲಾಯಿಸಲಾಗದ ಪರಿಣಾಮಗಳು ಮತ್ತು ಭೂಮಿ ಮೇಲಿನ ಎಲ್ಲಾ ಪರಿಸರ ವ್ಯವಸ್ಥೆಗಳಿಗೆ ಶಾಶ್ವತ ಹಾನಿಯನ್ನುಂಟುಮಾಡುವ ಅಪಾಯವಿದೆ ಎಂದು ಅವರು ಹೇಳಿದರು.

5 ಜಿ ತಂತ್ರಜ್ಞಾನವು ಮಾನವಕುಲ, ಪುರುಷ, ಮಹಿಳೆ, ವಯಸ್ಕ, ಮಗು, ಶಿಶು, ಪ್ರಾಣಿಗಳು ಮತ್ತು ಪ್ರತಿಯೊಂದು ರೀತಿಯ ಜೀವಿಗಳು, ಸಸ್ಯ ಮತ್ತು ಪ್ರಾಣಿಗಳಿಗೆ ಸುರಕ್ಷಿತವಾಗಿದೆ ಎಂದು ಸಾರ್ವಜನಿಕರಿಗೆ ಪ್ರಮಾಣೀಕರಿಸುವಂತೆ ವಕೀಲ ದೀಪಕ್ ಖೋಸ್ಲಾ ಅವರ ಮೂಲಕ ಸಲ್ಲಿಸಿರುವ ಮೊಕದ್ದಮೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.