ADVERTISEMENT

ವಿ. ಆರ್‌. ಚೌಧರಿ ಭಾರತೀಯ ವಾಯು ಪಡೆಯ ಮುಖ್ಯಸ್ಥ  

ಪಿಟಿಐ
Published 21 ಸೆಪ್ಟೆಂಬರ್ 2021, 16:02 IST
Last Updated 21 ಸೆಪ್ಟೆಂಬರ್ 2021, 16:02 IST
ವಿ. ಆರ್‌. ಚೌಧರಿ
ವಿ. ಆರ್‌. ಚೌಧರಿ   

ನವದೆಹಲಿ:ಏರ್ ಚೀಫ್‌ ಮಾರ್ಷಲ್ ಆರ್‌ಕೆಎಸ್‌ ಭದೌರಿಯಾ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾದ ಬಳಿಕ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿ. ಆರ್‌. ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಂಗಳವಾರ ತಿಳಿಸಿದೆ.

ಏರ್ ಮಾರ್ಷಲ್ ಚೌಧರಿ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

‘ಸೆಪ್ಟೆಂಬರ್ 30 ರಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರು ನಿವೃತ್ತಿ ಹೊಂದುತ್ತಿದ್ದಾರೆ. ಏರ್ ಮಾರ್ಷಲ್ ವಿ. ಆರ್. ಚೌಧರಿಯನ್ನು ಮುಂದಿನ ವಾಯುಪಡೆಯ ಮುಖ್ಯಸ್ಥರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಸಚಿವಾಲಯವು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ಏರ್ ಮಾರ್ಷಲ್ ಚೌಧರಿ ಅವರು ಡಿಸೆಂಬರ್ 29, 1982 ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.