ADVERTISEMENT

ಬಿಜೆಪಿ ನಾಲ್ಕೇ ವರ್ಷದಲ್ಲಿ ಎಸ್‌ಪಿ, ಬಿಎಸ್‌ಪಿಗಿಂತ ಹೆಚ್ಚು ಕೆಲಸ ಮಾಡಿದೆ: ಮೌರ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2021, 5:01 IST
Last Updated 17 ಜೂನ್ 2021, 5:01 IST
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ   

ಲಖನೌ: ಕಳೆದ 15 ವರ್ಷಗಳಲ್ಲಿ ಸಮಾಜವಾದಿ (ಎಸ್‌ಪಿ) ಮತ್ತು ಬಹುಜನ ಸಮಾಜವಾದಿ (ಬಿಎಸ್‌ಪಿ) ಸರ್ಕಾರಗಳಿಗೆ ಹೋಲಿಸಿದರೆ, ಬಿಜೆಪಿ ಸರ್ಕಾರವುನಾಲ್ಕೇ ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದುಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಮೌರ್ಯ, ಉತ್ತರ ಪ್ರದೇಶದಲ್ಲಿ ಮುಂಬರುವ (2022ರ) ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು300ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂದುವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಕಳೆದ15 ವರ್ಷಗಳಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಮಾಡಿರುವುದಕ್ಕಿಂತೂ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ರಾಜ್ಯದಲ್ಲಿ ನಾವು ಮಾಡಿದ್ದೇವೆ.2022ರಲ್ಲಿ (ವಿಧಾನಸಭೆ ಚುನಾವಣೆಯಲ್ಲಿ) ಮತ್ತೆ ನಾವು ಗೆಲುವು ಸಾಧಿಸಲಿದ್ದೇವೆ. ನಾವು300ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಅವರ 'ಹಗಲುಗನಸು' ಛಿದ್ರಗೊಳ್ಳಲಿದೆ' ಎಂದು ಎಸ್‌ಪಿ ಮತ್ತು ಬಿಎಸ್‌ಪಿಯತ್ತ ಚಾಟಿ ಬೀಸಿದ್ದಾರೆ.

ADVERTISEMENT

ಗಾಜಿಯಾಬಾದ್ ಜಿಲ್ಲೆಯ ಲೋನಿಯಲ್ಲಿ ಅಬ್ದುಲ್‌ ಸಮದ್‌ ಎಂಬ ವ್ಯಕ್ತಿಯ ಗಡ್ಡ ಕತ್ತರಿಸಿ, ಹಲ್ಲೆ ನಡೆಸಿ, ‘ಜೈಶ್ರೀರಾಂ’ ಎಂದು ಘೋಷಣೆ ಕೂಗುವಂತೆಬಲವಂತಪಡಿಸಲಾಗಿದೆ ಎನ್ನಲಾದ ಪ್ರಕರಣದ ಬಗ್ಗೆ ಪತ್ರಿಕ್ರಿಯಿಸಿದ ಡಿಸಿಎಂ,ʼಬಿಜೆಪಿ ಸರ್ಕಾರದ ಹೆಸರು ಕೆಡಿಸುವ ಸಲುವಾಗಿ ಫೇಕ್‌ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆʼ ಎಂದಿದ್ದಾರೆ.

ಆದಾಗ್ಯೂ, ಈ ಪ್ರಕರಣದಲ್ಲಿ ಯಾವುದೇ ರೀತಿಯ ʼಕೋಮುದ್ವೇಷʼದ ಕುರುಹುಗಳು ಕಂಡುಬಂದಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಐವರುಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗಾಜಿಯಾಬಾದ್‌ ಸೂಪರಿಂಟೆಂಡೆಂಟ್‌ ಆಫ್‌ ಪೊಲೀಸ್ (ಎಸ್‌ಪಿ) ಐರಾಜ್‌ ರಾಜಾ ತಿಳಿಸಿದ್ದಾರೆ.

ಇದೇ ವಿಚಾರವಾಗಿ,ಪತ್ರಕರ್ತೆ ಸಬಾ ನಖ್ವಿ, ಸುದ್ದಿ ಪೋರ್ಟಲ್‌ ‘ದಿ ವೈರ್‌’ ಮತ್ತು ಟ್ವಿಟರ್‌ ಅಧಿಕಾರಿಗಳು ಸೇರಿ 9 ಮಂದಿಯ ವಿರುದ್ಧ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.