ADVERTISEMENT

10ನೇ ತರಗತಿ: ಮೊದಲ ಹಂತದ ಪರೀಕ್ಷಾ ಫಲಿತಾಂಶ ಶಾಲೆಗಳಿಗೆ ರವಾನೆ – ಸಿಬಿಎಸ್ಇ

ಪಿಟಿಐ
Published 12 ಮಾರ್ಚ್ 2022, 12:56 IST
Last Updated 12 ಮಾರ್ಚ್ 2022, 12:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ(ಸಿಬಿಎಸ್ಇ) ಪಠ್ಯಕ್ರಮದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಮೊದಲ ಹಂತದ ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ಸಿಬಿಎಸ್ಇ ತಿಳಿಸಿದೆ.

2022ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಪರೀಕ್ಷೆ ನಡೆಸುವುದಾಗಿ ಸಿಬಿಎಸ್ಇ ಕಳೆದ ವರ್ಷ ಘೋಷಣೆ ಮಾಡಿತ್ತು. ಆ ಪ್ರಕಾರ ಮೊದಲ ಹಂತದಲ್ಲಿ 2021ರ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಈ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಶಾಲೆಗಳಿಗೆ ತಿಳಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಥವಾ ಪ್ರಾಕ್ಟಿಕಲ್ ಅಂಕಗಳು ಶಾಲೆಗಳ ಬಳಿಯೇ ಇದೆ ಎಂದು ಸಿಬಿಎಸ್ಇ ತಿಳಿಸಿದೆ.2ನೇ ಹಂತದ ಪರೀಕ್ಷೆಗಳು ಏ.26ರಿಂದ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT