ADVERTISEMENT

Covid-19: ಜನರ ಮೂಲಭೂತ ಸಮಸ್ಯೆಗಳು ಬಗೆಹರಿದಿಲ್ಲ: ರಾಹುಲ್ ಗಾಂಧಿ

ಏಜೆನ್ಸೀಸ್
Published 13 ಮೇ 2021, 4:07 IST
Last Updated 13 ಮೇ 2021, 4:07 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಜನರಮೂಲಭೂತ ಸಮಸ್ಯೆಗಳನ್ನುಬಗೆಹರಿಸಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮಾತು ಮುಂದುವರಿಸಿದ ರಾಹುಲ್, ಕೊರೊನಾವೈರಸ್ ದುಃಖದ ವಾರ್ತೆ ಪದೇ ಪದೇ ಬರುತ್ತಿದ್ದು, ಇದರ ಹೊಣೆಗಾರಿಕೆ ಇರುವವರು ಎಲ್ಲೋ ಅಡಗಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದೆ. ಕೇಂದ್ರ ಸರ್ಕಾರದ ಈ ಕ್ರೌರ್ಯವನ್ನು ದೇಶದ ನಾಗರಿಕರು ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ADVERTISEMENT

ಮತ್ತೆ ಮತ್ತೆ ದುಃಖದ ವಾರ್ತೆ ಬರುತ್ತಿದೆ. ಜನರ ಮೂಲಭೂತ ಸಮಸ್ಯೆಗಳನ್ನು ಇನ್ನೂ ಬಗೆಹರಿಸಿಲ್ಲ. ಈ ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಕೌರ್ಯವನ್ನು ಎಷ್ಟು ದಿನ ಜನರು ಸಹಿಸಿಕೊಳ್ಳಬೇಕು? ಹೊಣೆಗಾರಿಕೆ ಇರುವವರು ಎಲ್ಲೋ ಅಡಗಿ ಕುಳಿತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ ಸೋನಿಯಾ ಗಾಂಧಿ, ಶರದ್ ಪವಾರ್, ಉದ್ದವ್ ಠಾಕ್ರೆ, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಹೇಮಂತ್ ಸೊರೆನ್ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ 12 ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ದೇಶದಾದ್ಯಂತ ಉಚಿತ ಸಾರ್ವತ್ರಿಕ ಕೋವಿಡ್ ಲಸಿಕೆ ಅಭಿಯಾನ, ಸೆಂಟ್ರಲ್ ವಿಸ್ತಾಯೋಜನೆಯ ನಿರ್ಮಾಣವನ್ನು ಸ್ಥಗಿತಗೊಳಿಸುವುದು ಮತ್ತು ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.