ADVERTISEMENT

India Covid-19 Update: 21,257 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ಪಿಟಿಐ
Published 8 ಅಕ್ಟೋಬರ್ 2021, 5:42 IST
Last Updated 8 ಅಕ್ಟೋಬರ್ 2021, 5:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ 21,257 ಜನರಿಗೆ ಕೋವಿಡ್-19 ದೃಢಪಟ್ಟಿದ್ದು, ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 3,39,15,569 ಕ್ಕೆ ಏರಿಕೆಯಾಗಿದೆ. ಕಳೆದ 14 ದಿನಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 30,000 ಕ್ಕಿಂತ ಕಡಿಮೆಯಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,40,221 ಕ್ಕೆ ಇಳಿದಿದ್ದು, ಕಳೆದ 205 ದಿನಗಳಲ್ಲಿ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಬೆಳಿಗ್ಗೆ 8ವರೆಗಿನ ಲಭ್ಯವಾದ ಮಾಹಿತಿಯ ಪ್ರಕಾರ, 271 ಜನರು ಸಾವಿಗೀಡಾಗಿದ್ದು, ಮೃತರ ಒಟ್ಟು ಸಂಖ್ಯೆ 4,50,127 ಕ್ಕೆ ಏರಿದೆ. 24 ಗಂಟೆಗಳ ಅವಧಿಯಲ್ಲಿ 3,977 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳಲ್ಲಿ ಶೇ 0.71 ರಷ್ಟು ಸಕ್ರಿಯ ಪ್ರಕರಣಗಳಿವೆ. ಇದು 2020ರ ಮಾರ್ಚ್ ನಂತರ ಅತ್ಯಂತ ಕಡಿಮೆಯಾಗಿದೆ. ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು ಶೇಕಡ 97.96ರಷ್ಟಿದ್ದು, 2020ರ ಮಾರ್ಚ್ ನಂತರ ಅತಿ ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ದೈನಂದಿನ ಪಾಸಿಟಿವಿಟಿ ಪ್ರಮಾಣವು ಶೇ 1.53ರಷ್ಟಿದ್ದರೆ, ಕಳೆದ 39 ದಿನಗಳಿಂದ ಇದು ಶೇಕಡಾ ಮೂರಕ್ಕಿಂತ ಕಡಿಮೆ ಇದೆ.

ಗುರುವಾರ ಒಂದೇ ದಿನ 13,85,706 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ದೇಶದಲ್ಲಿ ಕೋವಿಡ್-19 ಪತ್ತೆಗಾಗಿ ನಡೆಸಿದ ಒಟ್ಟು ಪರೀಕ್ಷೆಗಳ ಸಂಖ್ಯೆ 58,00,43,190ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.