ADVERTISEMENT

ಕೋವಿಡ್‌-19: ದೇಶದಲ್ಲಿ ಹೊಸದಾಗಿ 39,361 ಪ್ರಕರಣ ಪತ್ತೆ

ಪಿಟಿಐ
Published 26 ಜುಲೈ 2021, 5:47 IST
Last Updated 26 ಜುಲೈ 2021, 5:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಒಂದೇ ದಿನಹೊಸದಾಗಿ 39,361 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,14,11,262ಕ್ಕೆ ಏರಿಕೆಯಾಗಿವೆ. ದೇಶದಲ್ಲಿ ಸೋಂಕು ದೃಢ ಪ್ರಮಾಣವು 35 ದಿನಗಳ ಬಳಿಕ ಶೇಕಡ 3ಕ್ಕಿಂತ ಹೆಚ್ಚಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‘ಸೋಮವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 416 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆಯೂ 4,20,967ಕ್ಕೆ ಹೆಚ್ಚಿದೆ. ಅಲ್ಲದೆ ಸಕ್ರಿಯ ಪ್ರಕರಣಗಳು 4,11,189ಕ್ಕೆ ಏರಿಕೆಯಾಗಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.31ರಷ್ಟು ಪಾಲನ್ನು ಹೊಂದಿದೆ’ ಎಂದು ಸಚಿವಾಲಯವು ತಿಳಿಸಿದೆ.

ಭಾನುವಾರ 11,54,444 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೆ 45,74,44,011 ಪರೀಕ್ಷೆಗಳನ್ನು ನಡೆಸಲಾಗಿದೆ. ಇದೇ ವೇಳೆ ಸೋಂಕು ದೃಢ‍ ಪ್ರಮಾಣವು ಶೇಕಡ 3.41 ಕ್ಕೆ ಏರಿಕೆಯಾಗಿದೆ.

ADVERTISEMENT

ಈವರೆಗೆ 3,05,79,106 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಮರಣ ಪ್ರಮಾಣವು ಶೇಕಡ 1.34ರಷ್ಟಿದೆ. ಇದುವರೆಗೆ ಒಟ್ಟು 43.51 ಕೋಟಿ ಡೋಸ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.